ಸರಂಶಾ
Pages (key to Page Status)
ಸಗಣಿಯ ಬೆನಕಂಗೆ ಸಂಪಗೆಯರಳಲ್ಲಿ ಪೂಜಿಸಿದಡೆ ರಂಜನೆಯಹುದಲ್ಲದೆ ಅದರ ಗಂಜಳ ಬಿಡದಣ್ಣಾ ಮಣ್ಣ ಪುತ್ಥಳಿಯ ಮಾಣದೆ ಜಲದಲ್ಲಿ ತೊಳೆದಡೆ ನಿಚ್ಚ ಕೆಸರಹುದಲ್ಲದೆ ಅದರಚ್ಚಿಗ ಬಿಡದಣ್ಣಾ. ಲೋಕದ ಮಾನವಂಗೆ ಶಿವದೀಕ್ಷೆಯ ಕೊಟ್ಟಡೆ ಕೆಟ್ಟವನೇಕೆ ಸದ್ಭಕ್ತನಹನು ಕೂಡಲಸಂಗಮದೇವಾ 93