ವಿಷಯಕ್ಕೆ ಹೋಗು

ಮಿಲನ - ಕಿವಿ ಮಾತೊಂದು

ವಿಕಿಸೋರ್ಸ್ದಿಂದ

ಚಿತ್ರ: ಮಿಲನ
ಸಾಹಿತ್ಯ: ಜಯಂತ್ ಕಾಯ್ಕಿಣಿ
ಸಂಗೀತ: ಮನೋ ಮೂರ್ತಿ
ಗಾಯನ: ಕುನಾಲ್ ಗಾಂಜಾವಾಲ


ಕಿವಿ ಮಾತೊಂದು
ಹೇಳಲೆ ನಾನಿಂದು
ದಾರಿ ನಿಂತಾಗ ಸಾಗಲೆ ಬೇಕೆಂದು
ನೆನ್ನೆ ಈಗಿಲ್ಲ ನಾಳೆಯು ತಿಳಿದಿಲ್ಲ
ನೀನು ನೀನಾಗಿ ಬಾಳಲೆ ಬೇಕಿಂದು!

ಹಸಿರಾಗಿದೆ ದೀಪವು ನಿನಗಾಗಿ
ನಸು ನಗುತಲೆ ಸಾಗು ನೀನು ಗೆಲುವಾಗಿ
ಹೊಸ ತಂಗಾಳಿ ಹೇಳಿದೆ ಮೆಲುವಾಗಿ
ಈ ಬಾಳುಂಟು ಬಾಳುವ ಸಲುವಾಗಿ

ಕಿವಿ ಮಾತೊಂದು
ಹೇಳಲೆ ನಾನಿಂದು
ದಾರಿ ನಿಂತಾಗ ಸಾಗಲೆ ಬೇಕೆಂದು!

ಬಾಗಿಲಿನಾಚೆಗೆ ತಾ ಬಂದು
ಕೂಗಿದೆ ಬಾಳು ಬಾ ಎಂದು
ಸಂತಸದಿಂದ ಓ ಎಂದು
ಓಡಲೆ ಬೇಕು ನೀನಿಂದು ..
ಸಾವಿರ ಕಣ್ಣಿನ ನವಿಲಾಗಿ
ನಿಂತಿದೆ ಸಮಯ ನಿನಗೆಂದು
ಕಣ್ಣನು ತೆರೆದು ಹಗುರಾಗಿ
ನೊಡಲೆ ಬೇಕು ನೀ ಬಂದು!

ಕಿವಿ ಮಾತೊಂದು
ಹೇಳಲೆ ನಾನಿಂದು
ದಾರಿ ನಿಂತಾಗ ಸಾಗಲೆ ಬೇಕೆಂದು
ನೆನ್ನೆ ಈಗಿಲ್ಲ ನಾಳೆಯು ತಿಳಿದಿಲ್ಲ
ನೀನು ನೀನಾಗಿ ಬಾಳಲೆ ಬೇಕಿಂದು!

ಬೆಳ್ಳಿಯ ಅಂಚಿನ ಈ ಮೋಡ
ನಗುವ ಬೀರಿದೆ ಬಾನಲ್ಲಿ
ನಿನ್ನೆಯ ಬಾಳಿನ ಸಂಗೀತ
ಹಾಡಲೆ ಬೇಕು ನೀನಿಲ್ಲಿ ..
ಮಿಂಚುವ ಅಲೆಗಳ ನದಿಯಾಗಿ
ಮುಂದಕೆ ಚಲಿಸು ನೀ ಬೇಗ
ನಿನ್ನೆಯ ಪಾಲಿನ ಈ ಆಟ
ಆಡಲೆ ಬೇಕು ನೀನೀಗ!

ಕಿವಿ ಮಾತೊಂದು
ಹೇಳಲೆ ನಾನಿಂದು
ದಾರಿ ನಿಂತಾಗ ಸಾಗಲೆ ಬೇಕೆಂದು
ನೆನ್ನೆ ಈಗಿಲ್ಲ ನಾಳೆಯು ತಿಳಿದಿಲ್ಲ
ನೀನು ನೀನಾಗಿ ಬಾಳಲೆ ಬೇಕಿಂದು!

ಹಸಿರಾಗಿದೆ ದೀಪವು ನಿನಗಾಗಿ
ನಸು ನಗುತಲೆ ಸಾಗು ನೀನು ಗೆಲುವಾಗಿ
ಹೊಸ ತಂಗಾಳಿ ಹೇಳಿದೆ ಮೆಲುವಾಗಿ
ಈ ಬಾಳುಂಟು ಬಾಳುವ ಸಲುವಾಗಿ

ಕಿವಿ ಮಾತೊಂದು
ಹೇಳಲೆ ನಾನಿಂದು
ದಾರಿ ನಿಂತಾಗ ಸಾಗಲೆ ಬೇಕೆಂದು
ನೆನ್ನೆ ಈಗಿಲ್ಲ ನಾಳೆಯು ತಿಳಿದಿಲ್ಲ
ನೀನು ನೀನಾಗಿ ಬಾಳಲೆ ಬೇಕಿಂದು!

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ