ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಔಷಧ ವಿಜ್ಞಾನ
ಗೋಚರ
ಔಷಧ ರಂಗದಲ್ಲಿ ಉಪಯೋಗಿಸುತ್ತಿರುವ ಅಸಂಖ್ಯಾತ ಸಂಯುಕ್ತಗಳಲ್ಲಿ 90%ಕ್ಕೂ ಮೀರಿದ ಸಂಯುಕ್ತಗಳು ಇಂಗಾಲ ಸಂಯುಕ್ತಗಳು. ಹೊರಗಾಯಕ್ಕೆ ಹಚ್ಚುವ ಮುಲಾವಿನಲ್ಲಿ, ಒಳಹುಣ್ಣಿನ ಉಪಶಮನದಲ್ಲಿ, ಎಲ್ಲ ಬಗೆಯ ದೈಹಿಕ ರೋಗ ಚಿಕಿತ್ಸೆಗಳಲ್ಲಿ ಅನೇಕ ಮಾನಸಿಕ ರೋಗ ಚಿಕಿತ್ಸೆಗಳಲ್ಲಿ ಶಸ್ತ್ರ ಚಿಕಿತ್ಸೆಗಳಲ್ಲಿ (ವೇದನಾಪ್ರತಿ ಬಂಧಕವಾಗಿ), ರೋಗಕಾರಕ ಸೂಕ್ಷಾಣು ಜೀವಿಗಳ ಎದುರು ಚಿಕಿತ್ಸೆಗಳಲ್ಲಿ ಶರೀರದ ಅಂಗಗಳ ಕಾರ್ಯಗಳನ್ನು ನಿಯಂತ್ರಿಸಲು, ಜನನ ನಿಯಂತ್ರಣಕ್ಕಾಗಿ-ಹೀಗೆ ಕೊನೆಯಿಲ್ಲ ದಷ್ಟು ಉಪಯೋಗಗಳನ್ನು ಪಡೆದಿರುವ ಔಷಧಗಳು ಬಲು ಪಾಲಿಗೆ ಇಂಗಾಲಸಂಯುಕ್ತಗಳು. ರಾಸಾಯನಿಕ ಚಿಕಿತ್ಸೆ ಇಂದು ನಾವು ಅನೇಕ ರೋಗಗಳನ್ನು ಗೆಲ್ಲಲು ನೆರವು ನೀಡಿದೆ.