ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಆಲದ ಮರ
ಗೋಚರ
ಇದು ಸು. 100' ಎತ್ತರ ಬೆಳೆದು ಒಳ್ಳೆ ಹರವಾಗಿ ಹಬ್ಬುತ್ತದೆ. ಮರದ ಟೊಂಗೆಗಳಿಂದ ಜೋತುಬಿದ್ದ ಬಿಳಲುಗಳು ಅಥವಾ ಜಡೆ ಬೇರುಗಳು ಟೊಂಗೆಗಳಿಗೆ ಕಂಬಗಳಂತೆ ಆಧಾರ ಕೊಟ್ಟು ಅದರ ಹಬ್ಬುವಿಕೆಗೆ ಸಹಾಯ ಮಾಡುತ್ತವೆ. ಈ ಮರಗಳನ್ನು ದಾರಿಯುದ್ದಕ್ಕೂ ನೆರಳಿಗಾಗಿ ಬಳಸುತ್ತಾರೆ. ಇದರ ಎಲೆ ಆಡು, ಕುರಿ, ದನಕರುಗಳಿಗೆ ಒಳ್ಳೆಯ ಆಹಾರ. ಕಾಗದ ತಯಾರಿಕೆಗೆ ಬೇಕಾಗುವ ಪಲ್ಪನ್ನು ತಯಾರಿಸಲು ಇದರ ಕಟ್ಟಿಗೆಯನ್ನು ಬಳಸುವರು. ಈ ಮರ ಸೌದೆಗೆ ಉಪಯೋಗವಾಗುತ್ತದೆ. ಆಲದ ಮರದ ಹಾಲನ್ನು ಹಲ್ಲುನೋವಿನ ಶಮನಕ್ಕೂ ಗಂಟುಕಟ್ಟಿದ ಹುಣ್ಣುಗಳಿಗೆ, ಬೆಚ್ಚಾರದಂತೆ ಬಾವುಬಂದ ಭಾಗಕ್ಕೆ ಲೇಪವಾಗಿಯೂ ಉಪಯೋಗಿಸುವುದುಂಟು. ಚಿಗುರಿನ ಕಷಾಯವನ್ನು ಭೇದಿಗೆ ಔಷಧವಾಗಿ ಕೊಡುತ್ತಾರೆ. ಹಾಲನ್ನು ಸಂಧಿವಾತಕ್ಕೆ ಉಪಯೋಗಿಸುತ್ತಾರೆ.