ಅಂತರಂಗದಲ್ಲಿ ಅರಿವಾದಡೇನಯ್ಯಾ ಬಹಿರಂಗದಲ್ಲಿ ಕ್ರೀ ಇಲ್ಲದನ್ನಕ್ಕ ? ದೇಹವಿಲ್ಲದಿರ್ದಡೆ ಪ್ರಾಣಕ್ಕಾಶ್ರಯವುಂಟೆ ? ಕನ್ನಡಿಯಿಲ್ಲದಿರ್ದಡೆ ತನ್ನ ಮುಖವ ಕಾಣಬಹುದೆ ? ಸಾಕಾರ ನಿರಾಕಾರ ಏಕೋದೇವ ನಮ್ಮ ಕೂಡಲಚೆನ್ನಸಂಗಯ್ಯನು.