ವಿಷಯಕ್ಕೆ ಹೋಗು

ಪುಟ:ಶತಕ ಸಂಪುಟ.pdf/೪೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಶತಕ ಸಂಪುಟ


ಜ್ಜನಮಂ ಕೈಕೊಳ್ಳದೆನ್ನೀ ಮನದೊಡತಣಹಂಕಾರವಿಂತಿಂತಿದಂ ದೇ-
ವನೆ ನೀಂ ತರ್ಗೊತ್ತಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೧೬ ‖

ಧನದೊಳ್ ಧಾನ್ಯಂಗಳೊಳ್ ಭೂಷಣವಿತತಿಗಳೊಳ್ ಪುತ್ರ ಸಂತಾನದೊಳ್
ಭೋ-
ಗನಿಕಾಯಭ್ರಾಂತಿಯೊಳ್ ಕಾಂತೆಯರ ತನುಸುಖಚ್ಛಾಯೆಯೊಳ್
ಮಾಯೆಯೊಳ್ ನಿಂ-
ದೆನಸುಂ ನಟ್ಟಿರ್ದ ಮಚ್ಚಿತ್ತಮನಭವ ನಿಜಾಂಘ್ರಿದ್ವಯಧ್ಯಾನಸಾನಂ-
ದನಿವಾಸಂ ಮಾಡಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೧೭ ‖

ಓರಂತೀ ದೇಹಮಂ ರಕ್ಷಿಸುವತಿಭರದಿಂದುಳ್ತು ತೆತ್ತುಂ ಸತೇಜ
ಕ್ಕಾರೇನಂ ಪೇಳ್ದೊಡಂ ಕೈಮುಗಿದು ಸುಗಿದು ಪೆರ್ಬಿಟ್ಟಿಯಂ ಪೊತ್ತು ಸಂಸಾ-
ರಾರಂಭಂಗೆಯ್ದು ದುಃಖಕ್ಕಲಸಿ ಮರುಗಿ ನಿಮ್ಮಂಘ್ರಿಯಂ ಪೊರ್ದಿದೆಂ ಸ-
ತ್ಯಾರಂಭಪ್ರೇಮಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೧೮ ‖

ಅವಿಚಾರಂ ಮಿಕ್ಕು ಲಾಭಂಬಡೆವತಿಭರದಿಂ ಸುತ್ತಿ ದೇಶಂಗಳೊಳ್ ವಿಂ-
ಧ್ಯವಿತಾನಪ್ರಾಂತದೊಳ್ ತಿರ್ರನೆ ತಿರುಗಿ ಮೊದಲ್ಗೆಟ್ಟು ಬೆಂಬಿಳ್ದು ದುಃಖ
ವ್ಯವಹಾರಕ್ಕಳ್ಕಿ ನಿಮ್ಮೀ ಚರಣಯುಗಳಮಂ ಪೊರ್ದಿದೆಂ ಭಕ್ತವೃಂದೋ-
ತ್ಸವಕಲ್ಪೋರ್ವೀಜ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೧೯ ‖

ಅವನಿಂತಾರಾದೊಡಂ ಪಲ್ಗಿರಿದು ಪಿರಿದು ಬಾಯಿಂದೆ ದೈನ್ಯಾಕ್ಷರಂ ಸಂ-
ಭವಿಸುತ್ತೆನ್ನಾಳ್ದ ಸಂದೇಶಮನೆ ಕರುಣಿಸೆಂದಲ್ಲಿ ಮರ್ತ್ಯಂಗೆ ಸಾವು-
ತ್ತವೆ ಪುಟ್ಟುತ್ತಿರ್ಪ ಸೇವಾನರಕನದಿಯನೀಸಾಡಿ ಮದ್‌ಭಾಗ್ಯದಿಂ ನಿ-
ನ್ನವನಾದೆಂ ದೇವ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೨೦ ‖

ತನುವಂ ಸ್ತ್ರೀ ಪುತ್ರರಂ ರಕ್ಷಿಪ ವಿಪುಳತೆ ಕೈಕೊಂಡು ಕಾರ್ಪಣ್ಯ ವಕ್ತ್ರಂ
ತನುಗಾತ್ರಂ ದೀನನೇತ್ರಂ ತುಷಲಘುತರಮಾತ್ರಂ ಕರಂ ಪೊರ್ದಿ ತೋರ್ಪೀ

——————
೧-೧ X (ಆ)