ವಿಷಯಕ್ಕೆ ಹೋಗು

ಪುಟ:ಶತಕ ಸಂಪುಟ.pdf/೫೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೧೬
ಶತಕ ಸಂಪುಟ


ಮುದದಿಂದಂ ಕಾಮಮಂ ಕೋಪಮನುರೆ ಜರೆದಾಮೋಹಮಂ ದಾಂಟಿ ಲೋಭ-
ತ್ವದ ಬೇರಂ ಕಿಳ್ತು ಮಾತ್ಸರ್ಯಮನುಡುಗಿ ಮದಾಲೇಪಮಂ ತೀರ್ಚಿಯಾಶಾ
ಸದನಕ್ಕಾಸತ್ತು ಬೇಸತ್ತತುಳಶಿವಸುಖಾವಾಸದೊಳ್ ಭಕ್ತಿಯಿಂ ತ್ವತ್
ಪದಮಂ ಸಾರ್ವಂತೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೭೯ ‖

ಎನಗಾರ್‌ ದೈವಂ ವಿರೂಪಾಕ್ಷನೆ ಗುರುವೆನಗಾವಂ ವಿರೂಪಾಕ್ಷನೇ ಕೇಳ್
ಜನಕಂ ತಾನಾರ್ ವಿರೂಪಾಕ್ಷನೆ ಜನನಿಯದಾವಳ್ ವಿರೂಪಾಕ್ಷನೇ ಆ-
ಳ್ದನದಾವಂ ಶ್ರೀವಿರೂಪಾಕ್ಷನೆ ನಿಜಸಖನಾವಂ ವಿರೂಪಾಕ್ಷನೇ ಎಂ-
ಬಿನಿತಂ ಸೈತಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ‖ ೮೦ ‖

ಮನೆದೈವಂ ಮುಖ್ಯದೈವಂ ಸುಖತರಕುಲದೈವಂ ಪರಾನಂದದೈವಂ
ಮನದೊಳ್ ನಟ್ಟಿರ್ಪ ದೈವಂ ಶರಣಜನಮಹೋತ್ಸಾಹದೈವಂ ಕರಂ ಪೆಂ-
ಪಿನ ದೈವಂ ದೈವದೈವಂ ಸಕಲಸುಕೃತದೈವಂ ಸುಧಾಕಾರದೈವಂ
ಘನದೈವಂ ನೀನೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ‖ ೮೧ ‖

ಪರಮಾರ್ಥಂ ನಿಮ್ಮ ಸಮ್ಯಕ್ ಪರತರನಿಜಮಂ ಭಾವಿಸಲ್ ಬಣ್ಣಿಸಲ್ ತಾ-
ಮರಸೋದ್ಭೂತಂಗೆ ಶಕ್ರಂಗಸುರರಿಪುಗೆ ವೇದಕತರ್ಕ್ಯ೦ ದಲೆಂದಂ-
ದೊರೆವಂತಾಂ ಮರ್ತ್ಯನೆಂಬೀ ವಚನಮೆ ಪರಿಹಾಸಾಸ್ಪದಂ ದೇವ ನೀನೇ
ಕರುಣಂಗೆಯ್ಯುತ್ತೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ‖ ೮೨ ‖

ಬಿಸವಂ ತಾಳ್ದಿರ್ದು ನಿತ್ಯಂ ಸ್ಮರನನುರಿಪಿಯುಂ ಕಾಮಿ ಸರ್ವೇಶ್ವರಂ ಮ-
ತ್ತಸಮಂ ಭಿಕ್ಷೇಶ್ವರಂ ಸರ್ವಮನಳಿದನಘಂ ಚಂದ್ರನಂ ಸೂಡಿಯುಂ ಕೋ-
ಪಸಮಾಯುಕ್ತಂ ವಿರುದ್ಧಪ್ರಕೃತಿ ತಿಳಿಯದಾರ್ಗ೦ ಕೃಪಾವಾರ್ಧಿ ನಿನ್ನಂ-
ಘ್ರಿಸರೋಜಂದೋರೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೮೩ ‖

ಸ್ಥಿರವಲ್ಲಂ ನೋಡೆ ಸರ್ಗಸ್ಥಿತಿಲಯವಾಗಿರ್ಪುದಿಂತೀ ಪ್ರಪಂಚಂ
ಸ್ಥಿರರೂಪಂ ನೀನೆ ಕರ್ಮದ್ವಿತಯವಿರಹಿತಂ ನೀನೆ ಶುದ್ಧಾತ್ಮಕಂ ನೀ-
ನೆ ರಸಾದಿವ್ಯೋಮದಿಕ್ಪೂರಿತ ನಿಜನಿಧಿ ನೀನೆಂಬಭಿಜ್ಞಾನಮಂ ಮದ್