ವಿಷಯಕ್ಕೆ ಹೋಗು

ಪುಟ:ಶತಕ ಸಂಪುಟ.pdf/೭೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೩೬
ಶತಕ ಸಂಪುಟ


ಪಾರದೆಯರ್ಚಿಸೆಮ್ಮ ಕಡುಸೊಂಪಿನ ಪೆಂಪಿನ ಹಂಪೆಯಾಳ್ದನಂ ‖ ೭೬ ‖

ಪಿರಿದಿದು ಸಾರಿದಪ್ಪೆನೆಲೆ ಸಾರಿದೆನಕ್ಕಟ ಸಾರಿದೆಂ ವೃಥಾ
ಚರಿಸದಿರಿಲ್ಲಿ ಪುಟ್ಟುವುದಪೂರ್ವಮಪೂರ್ವಮದಾಗಿಯಳ್ತಿಯಿಂ-
ದಿರೆ ನಲಿದುರ್ಬಿ ಬೊಬ್ಬಿಡುತೆ ಕೊರ್ಬುತೆ ಕೂಗುತೆ ಪಾಡುತಾಡುತ-
ಬ್ಬರಿಸುತೆ ಬೀಗಿ ತೂಗುತೊಸೆದರ್ಚಿಸು ಮಾನವ ಹಂಪೆಯಾಳ್ದನಂ ‖ ೭೭ ‖

ಮನೆ ನೆಳಲಾಗೆ ಪೆಂಡಿರಿನಿದಾಗೆ ಸುತ‌ರ್ ಪಿರಿದಾಗೆಯರ್ಥದಾ-
ರ್ಜನೆ ಘನವಾಗೆ ಯೌವನಮದಾಗೆ ಬಳಿಕ್ಕದನೇನನೆಂದಪೆಂ
ತನತನಗುರ್ವುತುಂ ಬಿಡದೆ ಕೊರ್ವುತೆ ಪರ್ವುತುಮುರ್ವಿಯೊಳ್ ಕರಂ
ನನೆಕೊನೆವೋಗಿ ಮಾಯೆ ಕೊರಚಾಡದೆ ಮಾಣ್ಬುದೆ ಹಂಪೆಯಾಳ್ದನೇ ‖ ೭೮


ವರಮುಖ್ಯಂ ಶಂಕರಾಖ್ಯಂ ಸಕಲಜನಹಿತೋಪಾಖ್ಯನಾನಂದಸೌಖ್ಯಂ
ಸ್ಥಿರಕಾಯಂ ತಾನಜೇಯಂ ಧವಳತರತನುಚ್ಛಾಯನಾನಂದಗೇಯಂ
ಪರಿಪಾಲಂ ಗೀತಲೋಲಂ ಕಮಲಭವಶಿರಶ್ಶೂಲನೌದಾರ್ಯಶೀಲಂ
ಕರುಣಾಂಗಂ ಭಕ್ತಸಂಗಂ ಮನಸಿಜಮದಭಂಗಂ ವಿರೂಪಾಕ್ಷಲಿಂಗಂ‖ ೭೯ ‖

ಎನಗಾಳ್ದಂ ತಾನೆ ನೀಳ್ದಂ ಕರಿಪತಿತನುವಂ ಸೀಳ್ದನಿಂತೊಪ್ಪೆ ಬಾಳ್ದಂ
ಘನಗಾಢಂ ವೇದಗೂಢಂ ಸಕಲಗುಣಗಣಪ್ರೌಢನತ್ಯಂತರೂಢಂ
ದ್ಯುನದೀಶಂ ಚಿತ್ ಪ್ರಕಾಶಂ ಶರಣಜನಸದಾತೋಷನಾನಂದಕೋಷಂ
ಮುನಿಸಂಗಂ ಸತ್ಯಶೃಂಗಂ ಕರುಣರಸತರಂಗಂ ವಿರೂಪಾಕ್ಷಲಿಂಗಂ| ೮೦ ‖

ಪೊಗಳೆಂ ಮಿಕ್ಕಿನ ಚಕ್ರಪಾಣಿಸರಸೀಜೋದ್ಭೂತಸಂಕ್ರಂದನಾ-
ದಿಗಳಂ ತಾನೆನೆ ಮರ್ತ್ಯಕೀಟಕರ ಮಾತಂತಿರ್ಕೆ ಮತ್ತಾವನಂ
ಬಗೆದಾರೆಂ ಬಿಡದಾ ಹರಂಗೆ ಶಶಿಭೂಷಂಗೀಶ್ವರಂಗೆಯ್ದೆ ನಾ-
ಲಗೆಯಂ ಮಾರಿದೆನೊಲ್ದು ಹಂಪೆಯ ವಿರೂಪಾಕ್ಷಂಗದೇನೆಂದಪೆಂ ‖ ೮೧ ‖
ಮನುಜರ ಮೇಲೆ ಸಾವವರ ಮೇಲೆ ಕನಿಷ್ಠರ ಮೇಲೆಯಕ್ಕಟಾ