ವಿಷಯಕ್ಕೆ ಹೋಗು

ಪುಟ:ಶತಕ ಸಂಪುಟ.pdf/೮೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೪೯


ದಪಗೂಳರ್ ಮುನಿವೆಣ್ಗಳಿಂ ಬಹಳ ದೂರಂ ತಾಳರೇ ಸೂಕ್ಷ್ಮದಿಂ-
ದಪನಿಂದ್ಯಂ ಬರೆ ಪೋಪುದೇ ಹರಹರಾ ಶ್ರೀ ಚೆನ್ನಸೋಮೇಶ್ವರಾ ‖ ೪೧ ‖

ಕೊಡಬಲ್ಲಂಗೆ ದರಿದ್ರಮಂ ಪ್ರವುಢಗಂ ಮೂಢಾಂಗನಾ ಸಂಗಮಂ
ಮಡೆಯಂಗುತ್ತಮಜಾತಿನಾಯಕಿಯ ಪಾಪಾತ್ಮಂಗೆ ನಿತ್ಯತ್ವಮಂ
ಕಡುಲೋಭಂಗತಿ ದ್ರವ್ಯಮಂ ಸುಕೃತಿಗಲ್ಪಾಯುಷ್ಯಮಂ ನೀಡುವಂ
ಕಡುಪಾಪಿಷ್ಟನು ಬೊಮ್ಮನೈ ಹರಹರಾ ಶ್ರೀ ಚೆನ್ನಸೋಮೇಶ್ವರಾ‖ ೪೨ ‖

ಪುರಗಳ್ ಬಾನೊಳು ನಿಂದುದಿಲ್ಲ ದಶಕಂಠಂಗಾಯಿತೇ ಲಂಕೆ ಸಾ-
ಗರದೊಳ್ ಪೋದುದು ದ್ವಾರಕಾನಗರಿ ಭಿಲ್ಲರ್ಗಾದುದಾ ಗೋಪುರಂ
ದುರುಳರ್ಗಾದುದು ಷಟ್ಪುರಂ ಮಧುರೆಯೊಳ್ ಕಂಸಾಸುರಂ ಬಾಳ್ದನೇ
ಸಿರಿ ಬಂದುಂ ನಿಲೆ ಪುಣ್ಯವೈ ಹರಹರಾ ಶ್ರೀ ಚೆನ್ನಸೋಮೇಶ್ವರಾ ‖ ೪೩ ‖

ಉಡುರಾಜಂ ಕಳೆಗುಂದಿ ಪೆರ್ಚದಿಹನೇ ನ್ಯಗ್ರೋದಬೀಜಂ ಕೆಲಂ
ಸಿಡಿದುಂ ಪೆರ್ಮರನಾಗದೇ ಎಳೆಗರುಂ ಎತ್ತಾಗದೇ ಲೋಕದೊಳ್
ಮಿಡಿ ಪಣ್ಣಾಗದೆ ದೈವದೊಲ್ಮೆಯಿರಲುಂ ಕಾಲಾನುಕಾಲಕ್ಕೆ ತಾಂ
ಬಡವಂ ಬಲ್ಲಿದನಾಗನೇ ಹರಹರಾ ಶ್ರೀ ಚೆನ್ನಸೋಮೇಶ್ವರಾ‖ ೪೪ ‖

ಸುರಚಾಪಾಯತಮಿಂದ್ರಜಾಲದ ಬಲಂ ಮೇಘಂಗಳಾಕಾರ ಬಾ-
ಲರು ಕಟ್ಟ್ಯಾಡುವ ಕಟ್ಟೆ ಸ್ವಪ್ನದ ಧನಂ ನೀರ್ಗುಳ್ಳೆ ಗಾಳೀಸೊಡರ್
ಪರಿವುತ್ತಿರ್ಪ ಮರೀಚಿಕಾ ಜಲ ಜಲಾವರ್ತಾಕ್ಷರಾದಂತಿರೈ
ಸಿರಿ ಪುಲ್ಲಗ್ರದ ತುಂತುರೈ ಹರಹರಾ ಶ್ರೀ ಚೆನ್ನಸೋಮೇಶ್ವರಾ‖ ೪೫ ‖

ಧೃತಶಾಪಾನ್ವಿತನಾ ಹಿಮಾಂಶುಗುರುವಿಂ ದೈತ್ಯಾರಿಯನ್ಯಾಂಗನಾ
ರತಿಯಿಂ ಕೀಚಕನಂ ಬಕಾರಿ ಮುರಿದಂ ಸುಗ್ರೀವನಿಂ ವಾಲಿ ತಾಂ
ಹತನಾದಂ ದಶಕಂಠನಾ ಹರಿಶರಕ್ಕೀಡಾದನೇವೇಳ್ವೆನಾಂ
ಅತಿ ಕಾಮರ್ಗತಿಹಾನಿಯೈ ಹರಹರಾ ಶ್ರೀ ಚೆನ್ನಸೋಮೇಶ್ವರಾ‖ ೪೬ ‖