ಜ್ಞಾನದ ಬಲದಿಂದ ಅಜ್ಞಾನದ ಕೇಡು ನೋಡಯ್ಯಾ ಜ್ಯೋತಿಯ ಬಲದಿಂದ ತಮಂಧದ ಕೇಡು ನೋಡಯ್ಯಾ ಸತ್ಯದ ಬಲದಿಂದ ಅಸತ್ಯದ ಕೇಡು ನೋಡಯ್ಯಾ ಪರುಷದ ಬಲದಿಂದ ಅವಲೋಹದ ಕೇಡು ನೋಡಯ್ಯಾ ಕೂಡಲಸಂಗನ ಶರಣರ ಅನುಭಾವದ ಬಲದಿಂದ ಎನ್ನ ಭವದ ಕೇಡು ನೋಡಯ್ಯಾ.