ಹಬ್ಬಕ್ಕೆ ತಂದ ಹರಕೆಯ ಕುರಿ ತೋರಣಕ್ಕೆ ತಂದ ತಳಿರ ಮೇುತ್ತು. ಕೊಂದಹರೆಂಬುದನರಿಯದೆ ಬೆಂದ ಒಡಲ ಹೊರೆವುತ್ತಲದೆ. ಅದಂದೆ ಹುಟ್ಟಿತ್ತು ಅದಂದೆ ಹೊಂದಿತ್ತು. ಕೊಂದವರುಳಿವರೆ ಕೂಡಲಸಂಗಮದೇವಾ. 129