ಅಹುದಾದಡಹುದೆನ್ನಿ

ವಿಕಿಸೋರ್ಸ್ದಿಂದ

ಅಹುದಾದಡಹುದೆನ್ನಿ ಅಲ್ಲವಾದಡಲ್ಲವೆನ್ನಿಸಹಜವಿದು ಸಜ್ಜನರ ಮನಕೆ ಸಮ್ಮತವು |ಪ|

ಕರಿಕೆಯಿಲ್ಲದ ಬಾಳು ಕರಿವರದನ ದಯೆ ಕೇಳುಅರಿತವರಿರೆ ಮನೆಯೊಳು ಅದು ಸ್ವರ್ಗವು ಕೇಳುಕರಣಿಕರೊಳಗಣ ನಂಟು ಕಟ್ಟಿದ ಹಣವಿನ ಗಂಟುಗುರುವಿನ ವಾಕ್ಯದಿ ಭಕ್ತಿ ಇಹಪರಕದು ಮುಕ್ತಿ |1|

ಒಕ್ಕಲಿಗಾಗದ ಗವುಡ ಮೇಲೆರಗಿ ಕುಕ್ಕುವ ಲಗಡಮಕ್ಕಳ ಪಡೆವುದು ಪುಣ್ಯ ನಲಿವು ನಗೆಗಳ ಪಣ್ಯಇಕ್ಕುವ ಅನ್ನವು ಧರ್ಮ ಇಹಪರಕದು ಅತಿ ಧರ್ಮಬಿಕ್ಕಳಿಕಿಕ್ಕಿದ ವ್ಯಾಧಿ ಯಮಪುರಕದು ಹಾದಿ |2|

ಕಂಡರೆ ಸೇರದ ನಾರಿ ಕೆಂಡವನುಗುಳುವ ಮಾರಿದಂಡವ ತೆರಿಸುವ ಪುತ್ರ ಹಗೆಗಳಿಗವ ಮಿತ್ರಉಂಡರೆ ಸೇರದ ತಾಯಿ ಉರಗನ ಮೆಕ್ಕೆ ಕಾಯಿಹಿಂಡನಗಲಿದ ಗೋವು ಹುಲಿಗಿಕ್ಕಿದ ಮೇವು |3|

ಪರನಾರಿಯರೊಡನಾಟ ಗರಲವನಟ್ಟುಂಬಾಟಬರೆದೂ ಅರಿಯದ ಲೆಕ್ಕ ಕಡೆಯಲಿ ಬಹು ದುಕ್ಕಇರಿತಕೆ ಬೆದರುವ ಮದಕರಿ ಬಾಯ್ಕಿರಿವ ಕೋಡಗ ಮರಿಕರೆ ಬರಲರಿಯದ ಗಂಡ ಅವ ನಾಚಿಕೆ ಭಂಡ |4|

ಸಮಯಕ್ಕೊದಗದ ಅರ್ಥ ಸಾವಿರವಿದ್ದರು ವ್ಯರ್ಥಸವತಿಯರೊಳಗಣ ಕೂಟ ಎಳನಾಗರ ಕಾಟಅಮರರಿಗೊದಗದ ಯಾಗ ಆಡಿನ ಮೇಲಣ ರೋಗನಮ್ಮ ಆದಿಕೇಶವನ ಭಕ್ತ ಅವ ಜೀವನ್ಮುಕ್ತ |5|