ಪುಟ:ಕವಿಯ ಸೋಲು.pdf/೩೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಏಕಾಗಬಾರದು?

ಮೇರುಗಿರಿಯೊಂದು ದಿನ ಗರ್ವದಿಂ ತಲೆಯೆತ್ತಿ
ಕೆಂಗದಿರ ಹೊಂಗದಿರ ಜಿಹೈಯಲಿ ನುಡಿಯಿತ್ತು
"ಈರೇಳು ಲೋಕಗಳಿಗಾಧಾರವಾಗಿಹೆನು,
ಎಲ್ಲವಂ ಧರಿಸಿಹೆನು ; ಸೂರ್ಯತಾರೆಗಳೆನ್ನ
ಬಳಿವಿಡಿದು ಸಂಚರಿಸಿ ನಾನಿಟ್ಟ ಶಾಸನವ
ಎಳ್ಳನಿತು ಲಂಘಿಸವು”, ಈ ಕೆಚ್ಚುನುಡಿಗೇಳಿ
ಸಾಗರದ ವಾರಿರಾಶಿಯಲೊಂದು ಹನಿಯದ್ದು
“ಎಲೆ ಮೇರುಪರ್ವತವೆ ! ಹದಿನಾಲ್ಕು ಲೋಕಗಳ
ಆಧಾರಗೀಧಾರವೆಂಬ ನುಡಿಯಂತಿರಲಿ
ಮುನಿದೆನಾದರೆ ಕೊಟ್ಟಿ ಮುಳುಗಿಸುವೆ ಹೆಸರುಸಿರು
ನಿನಗಿಲ್ಲವೆಂಬಂತೆ, ತಿಳಿಯದೇಂ ಪೌರುಷವು ?”
ಎಂದು ತನ್ನಯ ಬಲುಮೆ ಮಹಿಮೆಗಳನಾಡಿತ್ತು,
ಸೈಕತದ ರಾಶಿಯಲ್ಲಿ ಒಂದು ಕಣ ತಾನೆದ್ದು
"ಲೇಸಾಯ್ತು ನಿನ್ನ ನುಡಿ! ಮುನಿಯದೆಯ ವಿಸ್ತಾರ
ಸಾಗರದ ಹನಿಗಿನಿಯುಮೇನುಮುಂ ಇರದಂತೆ
ಕುಡಿಯುವೆನು, ಪೈಜೆಯಿದೆ ಹೂಡುನೀಂ ಪಂಥವನು"
ಎಂದಾಗ ಸಾಮರ್ಧ್ಯರುನ್ನತಿಯನಾಡಿತ್ತು.
ಪಂಧಗಳ ಪೌರುಷಕೆ ಮನುಜ ಕೋಟೆಯು ನಕ್ಕು
“ ಈ ಹುಚ್ಚು ಬಲು ಸೊಗಸು, ಕೇಳ್ವರಿಗೆ ಬಲು ಸೊಗ
ಹೆಡ್ಡರಿಗೆ ಹುಚ್ಚು ಹಿಡಿದರೆ ಮಾತು ಸೊಗಸುಂಟು”
ಎಂದವರನೇಳಿಸಿತು, ಆಗ ನಿರ್ದೆಹದಲ್ಲಿ
ಏಕಾಗಬಾರದೆಂದೊಂದು ದನಿ ನಭದಲ್ಲಿ
ನುಣ್ಣನೆಯ ಸಣ್ಣ ದನಿ ಗೀತಮಂ ಹಾಡಿತ್ತು.

೨೦