ವಿಷಯಕ್ಕೆ ಹೋಗು

ಪುಟ:ಕವಿಯ ಸೋಲು.pdf/೩೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ದೇವಯಾನಿ
ಮರದ ನೆಳಲ ತಂಪಿನಲ್ಲಿ
ಮೆಲ್ಲ ಮೆಲ್ಲನೇರುತಾ
ಗಿರಿಯ ಕಳೆದು ಸಂಖ್ಯೆಯಲ್ಲಿ
ಕಚನ ಮನದಿ ಒಯಸುತಾ


ನಡೆದಳವಳು ದೇವಯಾನಿ
ಪ್ರಣಯ ಭರದಿ ಕುಗ್ಗುತಾ
ಬಿನದ ಬನದ ನಡುವೆ ನಿಂದು
ಕಣ್ಣ ನೀರು ಸುರಿಸುತ್ತಾ

ಸಂಜೆಗೆಂಪ ತಳಿರುಗೆಂಪ
ತುಟಿಯ ಕೆಂಪು ಮಾರಲು
ಅಲರ ಕಂಸ ಎಲರ ಕಂಪ
ಉಸಿರು ಕಂಪು ಜರಿಯಲು

ತಂಪಿನಲರು ಕಂಪಿನೆಲರು
ಮುಂಗುರುಳನು ತಿದ್ದಲು
ಮನದಿ ಪೊಸತು ರಾಗವೇರಿ
ಸುಖಕೆ ಪುಳಕವೇರಲು

೨೨