ಪುಟ:ಕವಿಯ ಸೋಲು.pdf/೩೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯ ಸೋಲು


ನಿನ್ನ ಹಡೆದ ತಾಯಿ ತಂದೆ
ಏನು ನೋಂಪಿ ನೋಂತರೋ
ಇನಿತು ಸುಗುಣ ಇನಿತು ರೂಪ
ನಿನ್ನೊಳೆಂತು ಸೇರಿತೋ !

ನಿನ್ನ ನೆಪದಿ ಮನದಲೊಂದು
ಕಿಚ್ಚು ಉರಿಯುತಿರುವುದು
ನಿನ್ನ ಬಿಟ್ಟು ಜೀವವಿರದು
ನೀನೆ ಪೊರೆಯಬೇಹುದು.

ನಿನ್ನ ಕೊರಳ ಹಾರ ಪದಕ
ಎನ್ನ ನೀನು ಧರಿವುದು,
ನಿನ್ನ ಮಡದಿ ರನ್ನೆಯೆಂದು
ದೇವಲೋಕಕೊಯ್ವುದು.

ನಾನು ನೀನು ಮದುವೆಯಾಗೆ
ಗುರುಗಳವರು ಬಿಗರು.
ದೈತ್ಯ ಗುರುವು ದೇವ ಗುರುವು
ಸೇರಿ ಸಂಧಿವಾಳ್ಪರು.

ಇಂದಿನಿಂದ ಕಲಹವಿಲ್ಲ
ದೇವ ದೈತ್ಯ ಜಾತಿಗೆ,
ಮುಂದೆ ಅಣ್ಣ ತಮ್ಮ ಎಂದು
ಪ್ರೇಮದಿಂದ ಸೇರುಗೆ."

೨೯