ಪುಟ:ಕವಿಯ ಸೋಲು.pdf/೪೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯ ಸೋಲು

ಮಾಯೆಯೆಂಬ ಬಲೆಯ ಬೀಸಿ
ಮನುಜ ವಿಾನ ಹಿಡಿದು ತಿಂಬ
ಜಾಲಗಾರ ನಿನಗದೆಂತು
ದಯೆಯದಿಪ್ಪುದು.

ಹೊಲ್ಲೆತನವ ಪೆರ್ಮೆಯೆಂದು
ಎಲ್ಲ ಗುಣವ ಹೇಳಿಕೊಂಡು
ಕಳ್ಳನಂತೆ ಅಡಗಿಕೊಂಡು
ಕೈಗೆ ಸಿಕ್ಕದೆ,

ನೀಚತನಕೆ ನೀನೆ ಹೇಸಿ
ನಾಚಿಕೊಳುತ ಮುಖವ ಮರೆಸಿ
ಗೋಚರಿಸದ ತಿರುಗುತಿರುವೆ
ಲೋಕವರಿಯಲು.

ನಾಡನಾಳ್ಳ ಸಾರ್ವಭೌಮ
ಬಿರುದು ಪಡೆದ ಚಕ್ರವರ್ತಿ
ಕಣ್ಣ ಕಾಂಬ ತೆರದಿ ನೀನು
ಕಾಣ ಬೇಡವೆ?

ರೂಪು ದೇಹ ಏನುಮಿಲ್ಲ
ಸೈಪು ಪಾಪ ಏನುಮಿಲ್ಲ
ಕಷ್ಟ ದುಃಖ ಅಂಟಲಿಲ್ಲ
ದೇವನೇತಕೆ?

೩೫