ಪುಟ:ಕವಿಯ ಸೋಲು.pdf/೭೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯ ಸೋಲು


ಶಾಸ್ತ್ರ ಗೀಸ್ತ್ರ ತಿಳಿಯೆ ನಾನು
ಬರದ ಜನರು ಹೆಂಡಿರಾಗಿ
ಸೇವೆಮಾಡಲಿ.

ನೋಟ ಬೇಟ ಗಂಡಿಗೆಂದು
ಧರ್ಮಶಾಸ್ತ್ರ ಹೆಣ್ಣಿಗೆಂದು
ನುಡಿವರೆಲ್ಲರು.

ಕೋರ್ಟು ಗೀರ್ಟು ಆಡಬೇಡಿ
ಜಡ್ಡಿ ಧರ್ಮವೇನು ಬಲ್ಲ
ನಾನು ತಿಳಿಸುವೆ.

ಕುರ್ಚಿಮೇಲೆ ಕುಳಿತುಕೊಂಡು
ಏನೋ ಗೀಚಿ ಎದ್ದು ಬರುವ
ಮಾತಿದಲ್ಲವು.

ತನ್ನ ಮಗಳ ನಿಮಗೆ ಕೊಟ್ಟು
ತನ್ನ ಮಗನ ಎನಗೆ ಕೊಟ್ಟು
ಮದುವೆ ಮಾಡಲಿ.

ಎನ್ನ ದುಃಖ ಆರಿಗುಂಟು
ಬಾಳಬೇಕು, ಬಾಳಲಾರೆ
ಹಾಳು ಲೋಕವು.

ಬಯ್ವ ಜನರು ಜರಿವ ಜನರು
ಅವರಿಗೇನು, ಬಾಯಿ ಕೊಬ್ಬು
ನೋವು ತೆಗೆವರೆ?

೬೧