ಪುಟ:ಕವಿಯ ಸೋಲು.pdf/೯೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕವಿಯ ಸೋಲು

ಮಾನವನೆ ಬಯಸುತ್ತ
ತನ್ನ ಕತೆ ನೆನೆಯುತ್ತ
ದುಃಖದಿಂ ತುಂಬುತ್ತ
ನರಸತಿಗೆ ಮುನಿಯುತ್ತ
"ಪರರೊಡವೆ ಬಯಸುವರು
ಪರವಧುವ ಕೋರುವರು
ಲೋಕ ಕಂಟಕರಿವರು
ವಂಶವಿದು ಬೆಳೆಯದಿರಲಿ;
ಕ್ರೂರ ಶತ್ರುಗಳಿವರ
ರಾಜ್ಯದೈಸಿರಿ ಪಿಡಿದು
ಭೋಗ ಭಾಗ್ಯವ ಪಿಡಿದು
ಇವರ ಮಡದಿಯರೊಡನೆ
ಇವರ ಮಡದಿಯುರುಡುಗೆ.
ಸುಳಿಸುಳಿದು ಪೊರಡಿಸಲಿ
ಗತಿಗೆಡಿಸಿ ಸರಳಿಸಲಿ
ಎನ್ನೊಡಲ ಕಷ್ಟಗಳು
ಎಂದೆಂದು ಮರೆಯದಿರಲಿ"
ಎಂದು ಬಿರುನುಡಿ ನುಡಿದು
ಕಣ್ಣೀರು ಹರಿಯುತಿರೆ
ತುಂಬು ಹೊಳೆ ಹರಿಯುತಿರೆ
ದುಃಖ ಮೂರ್ಛಿತೆಯಾಗಿ
ಕ್ರೋಧ ಮೂರ್ಛಿತೆಯಾಗಿ
ಶಪಿಸಿದಳು ಬಾಲೆ
ತುಂಬು ಹೊಳೆ ಪಾಲಾಗಿ
ಬಿದ್ದಳಾ ಬಾಲೆ.

೮೨