ಯಮನೆಲ್ಲೋ ಕಾಣೆನೆಂದ್ಹೇಳಬೇಡ
ಯಮನೆಲ್ಲೋ ಕಾಣೆನೆಂದ್ಹೇಳಬೇಡ
[ಸಂಪಾದಿಸಿ]- ರಾಗ: ಶಂಕರಾಭರಣ ತಾಳ: ಆದಿ
ಯಮನೆಲ್ಲೋ ಕಾಣೆನೆಂದಹೇಳಬೇಡ
ಯಮನೆ ಶ್ರೀರಾಮನು ಸಂದೇಹ ಬೇಡ ||ಪ||
ನಂಬಿದ ವಿಭೀಷಣಗೆ ರಾಮನಾದ
ನಂಬದಿದ್ದ ರಾವಣಗೆ ಯಮನಾದ ||೧||
ನಂಬಿದ ಅರ್ಜುನನಿಗೆ ಭೃತ್ಯನಾದ
ನಂಬದ ದುರ್ಯೋಧನನಿಗೆ ಮೃತ್ಯುವಾದ ||೨||
ನಂಬಿದ ಪ್ರಹ್ಲಾದನಿಗೆ ಹರಿಯಾದ
ನಂಬದ ಹಿರಣ್ಯಕನಿಗೆ ಉರಿಯಾದ ||೩||
ನಂಬಿದ ಉಗ್ರಸೇನಗೆ ಮಿತ್ರನಾದ
ನಂಬದಿದ್ದ ಕಂಸನಿಗೆ ಶತ್ರುವಾದ ||೪||
ನಂಬಿಕೊಳ್ಳಿ ಬೇಗ ಶ್ರೀಕೃಷ್ಣದೇವನ
ಕಂಬು ಚಕ್ರಧಾರಿ ಪುರಂದರವಿಠಲನ ||೫||
ರಚನೆ:- ಪುರಂದರದಾಸರು.[೧]
ನೋಡಿ
[ಸಂಪಾದಿಸಿ]ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಪುರಂದರದಾಸರು
ಪರಿವಿಡಿ
[ಸಂಪಾದಿಸಿ]ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ |
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ