ಯಾರೆ ಬಂದವರು ಮನೆಗೆ

ವಿಕಿಸೋರ್ಸ್ದಿಂದ

ಯಾರೆ ಬಂದವರು ಮನೆಗೆ[ಸಂಪಾದಿಸಿ]

ರಾಗ: ಸೌರಾಷ್ಟ್ರ, ತಾಳ: ಅಟ್ಟ,
ಯಾರೆ ಬಂದವರು ಮನೆಗೆ ಮತ್ಯಾರೆ ಬಂದವರು
ನಾರಾಯಣ ಕೃಷ್ಣ ನಾಥನಲ್ಲದೆ ಬೇರೆ ||ಪಲ್ಲವಿ||

ವಜ್ರರೇಖೆಗಳಿವೆ ಮನೆಯಲ್ಲಿ ಕಾಲ
ಗೆಜ್ಜೆ ಧ್ವನಿ ಕೇಳಿ ಬರುತಿದೆ
ವಜ್ರಮಾಣಿಕ್ಯವೆಲ್ಲ ಹರಿದು ಬಿದ್ದಿವೆ
ಮಜ್ಜಿಗೆಯೊಳಗೆ ಕಾಣ್ವ ಬೆಣ್ಣೆಯ ಕಾಣೆ ||೧||

ಕೊಂಬು ಕೊಳಲು ರಭಸಗಳಿವೆ
ಕದಂಬ ಕಸ್ತೂರಿ ಪೆಂಪೆಸೆದಿವೆ
ಪೂಂಬಟ್ಟೆ ಚಲ್ಲಣ ಚಲ್ಲಿದೆ ಹಾಲು
ಕುಂಭ ಒಡೆದು ಮನೆತುಂಬ ಬೆಳ್ಳಗಾಯಿತು ||೨||

ಮಿಂಚು ಹುಳದಂತೆ ಹೊಳೆವುತ ತಮ್ಮ
ಸಂಚರರೊಡಗೂಡಿ ಚಲಿಸುತ್ತ
ವಂಚಿಸಿ ಬೆಣ್ಣೆಯ ಮೆಲ್ಲುತ ನಮ್ಮ
ಲಂಚದ ಪುರಂದರವಿಠಲನಲ್ಲದೆ ಬೇರೆ ||೩|| [೧]
ರಚನೆ: ಪುರಂದರದಾಸರು.

ನೋಡಿ[ಸಂಪಾದಿಸಿ]

ಪರಿವಿಡಿ[ಸಂಪಾದಿಸಿ]

ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ[ಸಂಪಾದಿಸಿ]

  1. ದಾಸವಾಣಿ