ಪುಟ:ಬಸವಣ್ಣನವರ ವಚನಸಂಪುಟ - ೧.pdf/೪೮೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಸಮಗ್ರ ವಚನ ಸಾಹಿತ್ಯ ಪ್ರಕಟನ ಯೋಜನೆ

'ಸಮಗ್ರ ವಚನಸಾಹಿತ್ಯ ಪ್ರಕಟನ ಯೋಜನೆ' ಕರ್ನಾಟಕ ಸರ್ಕಾರದ ಈವರೆಗಿನ ಸಾಹಿತ್ಯಕ ಸಾಧನೆಗಳಲ್ಲಿ ಒಂದು ಮಹತ್ವದ ದಾಖಲೆಯಾಗಿದೆ. ಇದು ಒಂದು ಸಾಹಿತ್ಯಕೃತಿಯ ಪ್ರಕಟನೆಯಲ್ಲ ಒಂದು ಸಾಹಿತ್ಯ ಪ್ರಕಾರದ ಪ್ರಕಟನೆ .
ತತ್ವಕ್ಕೆ ತತ್ವ, ಸಾಹಿತ್ಯಕ್ಕೆ ಸಾಹಿತ್ಯವಾಗಿರುವ 'ವಚನ ವಾಲ್ಮೀಯ' ಏಕಕಾಲಕ್ಕೆ ಆತ್ಮಕಲ್ಯಾಣವನ್ನೂ ಸಮಾಜ ಕಲ್ಯಾಣವನ್ನೂ ಪ್ರತಿಪಾದಿಸುವ ಮೂಲಕ ಜಾಗತಿಕ ಮಹತ್ವ ಗಳಿಸಿದೆ. ಈ ಮೌಲಿಕ ಸಾಹಿತ್ಯವನ್ನು ಸುಲಭ ಬೆಲೆಯಲ್ಲಿ ಜನತೆಗೆ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಇವತ್ತಿನ ಮಿತಿಗೆ ಸಿಗುವ ಬಸವಯುಗ ಮತ್ತು ಬಸವೋತ್ತರ ಯುಗಗಳ ಎಲ್ಲ ಶರಣರ ಎಲ್ಲವಚನಗಳನ್ನು ಸಂಗ್ರಹಿಸಿ, ಸಂಸ್ಕರಿಸಿ, ಪ್ರಕಟಿಸಿದ ಪ್ರಯತ್ನವಿದು. ಈ ಮೂಲಕ ಬಸವಯುಗದ ಹಲವು ಹೊಸ ವಚನಗಳು ಬೆಳಕಿಗೆ ಬರುವುದರೊಂದಿಗೆ, ಬಸವೋತ್ತರ ಯುಗದ ಸಮಗ್ರ ವಚನ ಸಂಪತ್ತು ಪ್ರಥಮಸಲ ಹೊರ ಬರುತ್ತಿರುವುದು ಈ ಯೋಜನೆಯ ವಿಶೇಷ ಸಾಧನೆಯಾಗಿದೆ.
೮೦೦ ವರ್ಷಗಳುದ್ದಕ್ಕೂ ಬೆಳೆದುಬಂದ ಈ ಸಾಹಿತ್ಯದ ವ್ಯಾಪ್ತಿಯನ್ನು ಪ್ರಥಮಬಾರಿ ಗುರುತಿಸಿಕೊಡುತ್ತಿರುವ ಈ ಸಾಹಸದ ಫಲವಾಗಿ, ಸಾವಿರ ವಚನಗಳು ಸುಮಾರು ಸಾವಿರ ಪುಟ ವ್ಯಾಪ್ತಿಯ ಸಂಪುಟಗಳಲ್ಲಿ (ವಚನ ಪರಿಭಾಷಾಕೋಶ ಸೇರಿ) ಬೆಳಕು ಕಾಣುತ್ತಿವೆ.