ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೨೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೯೯

ಪಿಸುಣನಿಗೆ ಉಪಕಾರ

ಗಂಡ ಹೆಂಡಿರು ಕೂಡಿಕೊಂಡು ನೆರೆಯೂರಿನ ಸಂತೆಗೆ ಹೋಗಿ, ತಮಗೆ ಬೇಕಾದ ಅರಿವೆ ಅಂಚಡಿ, ಕಾಳುಕಡ್ಡಿ ಕೊಳ್ಳುವುದರಲ್ಲಿ ತೊಡಗಿದರು. ಜವಳಿಸಾಲಿನಿಂದ ಕಿರಾಣಿ ಸಾಲಿನ ಕಡೆಗೆ ಸಾಗಿದಾಗ ಅಲ್ಲೊಬ್ಬ ಕುರುಡ ಮುದುಕನು ಹೊರಟಿದ್ದನು. ಆತನ ಕಣ್ಣು ಕಾಣದೆ ಮುಳ್ಳು ಕಲ್ಲು ತುಳಿಯುತ್ತ ತೋಟದ ಬೇಲಿಯಲ್ಲಿಯೇ ಸಾಗಿದ್ದನು—"ಯಾರಾದರೂ ನನ್ನನ್ನು ಹಾದಿಗೆ ಹಚ್ಚಿರಪ್ಪೋ. ನಾನು ಕಣ್ಣು ಕಾಣದ ಕುರುಡ. ಮುಳ್ಳುಬೇಲಿಯಲ್ಲಿ ಹೋಗಿ ಬೀಳುತ್ತೇನೆ. ಒಂದಿಷ್ಟು ಪುಣ್ಯ ಕಟ್ಟಿಕೊಳ್ಳಿರೆಪ್ಪ ಪುಣ್ಯಾತ್ಮರ್‍ಯಾ" ಎಂದು ಹಲಬುತ್ತಿದ್ದನು.

ಕುರುಡನ ಸ್ಥಿತಿಯನ್ನು ಕಂಡು ಗಂಡನು ಕನಿಕರಿಸಿ ಹೆಂಡತಿಗೆ ಹೇಳಿದನು — "ಆ ಮುದುಕನ ಕೈ ಹಿಡಿದು ದಾರಿಗೆ ಹಚ್ಚು"

ಗಂಡನಪ್ಪಣೆಯಂತೆ ಹೆಂಡತಿಯು ಕುರುಡನ ಕೈಹಿಡಿದು ಮೆಲ್ಲನೆ ಹೊರಳಿಸಿ ಸರಿದಾರಿಗೆ ಹಚ್ಚಿ, ಕೈಬಿಡಬೇಕೆಂದರೆ ಕುರುಡನು ಕೈಬಿಡದೆ ಕೂಗಿಕೊಳ್ಳತೊಡಗಿದನು — "ನನ್ನ ಹೆಂಡತಿ ನೋಡಿರೋ ಅಪ್ಪಾ ಈಕೆ. ನನ್ನ ಕೈಬಿಟ್ಟು ಇನ್ನಾವನೋ ಗೆಳೆಯನ ಕೂಡ ಓಡಿಹೋಗಬೇಕೆನ್ನುತ್ತಾಳೆ. ನ್ಯಾಯ ಮಾಡಿರೋ ಅಪ್ಪಾ ಕುರುಡನದು" ಎನ್ನುತ್ತ ಗಟ್ಟಿಯಾಗಿ ಬೊಬ್ಬಿಟ್ಟನು. ಜನ ನೆರೆಯಿತು.

ತನ್ನ ಹೆಂಡತಿಂಯನ್ನು ಕುರುಡನ ಕೈಯೊಳಗಿಂದ ಬಿಡಿಸಿಕೊಳ್ಳಲು ಗಂಡನು ಪ್ರಯತ್ನಿಸಿದರೆ ಮತ್ತಿಷ್ಟು ಬೊಬ್ಬಾಟವೇ ಆಗತೊಡಗಿತು. ಆಕೆ ತನ್ನ ಹೆಂಡತಿಯೆಂದು ಕುರುಡ ಹೇಳುವನು; ನನ್ನ ಹೆಂಡತಿಯೆಂದು ಆತ ಹೇಳುವನು. ಆತನು ನನ್ನ ಗಂಡನೆಂದು ಹೆಂಡತಿ ಹೇಳಿದರೆ, ತನ್ನನ್ನು ಬಿಟ್ಟು ಹೊರಟಿದ್ದರಿಂದ ಹಾಗೆ ಹೇಳುತ್ತಾಳೆಂದು ಕುರುಡನ ಕೂಗಾಟ.

ಆ ನ್ಯಾಯ ಚಾವಡಿಯ ಕಟ್ಟೆಯೇರಿತು. ಅಲ್ಲಿಯೂ ಬಗೆಹರಿಯಲಿಲ್ಲ. ಬಳಿಕ ಗೌಡನು ಸಿಟ್ಟಿಗೇರಿ ಆ ಮೂವರನ್ನೂ ಮೂರು ಬೇರೆ ಬೇರೆ ಕೋಣೆಗಳಲ್ಲಿ ಹಾಕಿಸಿ ಒಂದೊಂದು ಕೋಣೆಯ ಮುಂದೆ ಒಬ್ಬೊಬ್ಬ ಓಲೆಕಾರನನ್ನು ಕಾವಲಿಟ್ಟನು.

ಮರುದಿವಸ ಗೌಡನು ಆ ಮೂವರೂ ಕಾವಲುಗಾರನನ್ನು ಬೇರೆಬೇರೆಯಾಗಿ ಕರೆಯಿಸಿಕೊಂಡು, ಒಳಗಿದ್ದವರು ಒಡನುಡಿಯುತ್ತಿದ್ದ