ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೮೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಕಾಳಿನ ಮೇಲೆ ಹೆಸರು

ಸಾಹುಕಾರನು ನೆಲಗಡಲೆ ತಿನ್ನುತ್ತ ತನ್ನ ಮನೆಯ ತಲೆವಾಗಿಲ ಮುಂದೆ ಕುಳಿತಿದ್ದನು. ಅತ್ತಕಡೆಯಿಂದ ಒಬ್ಬ ಸಾಧು ಬಂದು ಭಿಕ್ಷೆ ಬೇಡಿದನು. “ಮುಂದಿನ ಮನೆಗೆ ಹೋಗು?” ಎಂದು ಸಾಹುಕಾರನು ನುಡಿದನು.

“ತಿನ್ನಲು ನಾಲ್ಕು ಕಾಯಿಗಳನ್ನಾದರೂ ಕೊಡಿರಿ” ಎಂದನು ಸಾಧು.

“ಅವು ಪುಕ್ಕಟೆ ಬಂದಿಲ್ಲ. ನಮಗೆ ಸಾಕಾಗಿ ಉಳಿದರೆ, ನಿನ್ನನ್ನು ಕರೆದು ಕೊಡುವೆನು. ಆಯಿತೇ ?” ಎಂದು ಸಾಹುಕಾರನು ಹೀಯಾಳಿಸಿದನು.

“ಎಲ್ಲವನ್ನೂ ನಾನೇ ತಿನ್ನುವೆನೆಂದರೆ ಸಾಧ್ಯವೇ ? ಪ್ರತಿಯೊಂದು ಕಾಳಿನ ಮೇಲೆ ಅದು ಹುಟ್ಟುವಾಗಲೇ ಅದನ್ನು ಯಾರು ತಿನ್ನಬೇಕಾಗಿದೆಯೋ ಅವರ ಹೆಸರು ಬರೆದಿರುತ್ತದೆ.”

ಸಾಹುಕಾರನ ತಲೆ ತಿರುಗಿತು - ಸಾಧುವಿನ ಬ್ರಹ್ಮಜ್ಞಾನವನ್ನು ಕೇಳಿ. ಕೇಳಿದನು. - “ನೀನೊಬ್ಬ ಒಂಟೆಯ ಮೇಲಿನ ಜಾಣನೇ ಬ೦ದಿರುವೆಯಲ್ಲ | ಇಲ್ಲಿ ನೋಡು ನನ್ನ ಕೈ ಬೆರಳಿನಲ್ಲಿ ಹಿಡಿದ ಕಾಳು ! ಇದರ ಮೇಲೆ ಯಾರ ಹೆಸರು ಬರೆದಿದೆ ಹೇಳು ನೋಡುವಾ."

“ಅದರ ಮೇಲೆ ಒಂದು ಕಾಗೆಯ ಹೆಸರಿದೆ. ಆ ಕಾಳು ಅದರ ಆಹಾರ” ಎಂದನು ಸಾಧು.

ಸಾಹುಕಾರನು ಈರ್ಷೆಯಿಂದ - “ಇದೋ ನಾನಿದನ್ನು ತಿಂದುಬಿಡುವೆ. ಎಲ್ಲಿದೆ ನಿನ್ನ ಆ ಕಾಗೆ ?” ಎನ್ನುತ್ತ ಆ ಕಾಳನ್ನು ಬಾಯಲ್ಲಿ ಒಗೆದುಕೊಳ್ಳಹೋದನು. ಅದು ತಪ್ಪಿ ಅವನ ಮೂಗಿನ ಹೊರಳೆಯಲ್ಲಿ ಸೇರಿಬಿಟ್ಟಿತು.

ನೆಲಗಡಲೆಯಕಾಳು ಮೂಗಿನ ಹೊರಳೆಂಯಲ್ಲಿ ಸೇರಿಬಿಟ್ಟಿದ್ದರಿ೦ದ ಸಾಹುಕಾರನ ಉಸಿರಾಟಕ್ಕೆ ತಡೆಯಾಯಿತು. ಕೂಗಾಡತೊಡಗಿದನು. ಆ ಗಲವಿಲಿಗೆ ನೆರೆಹೊರೆಯವರು ನೆರೆದರು. ಆತನನ್ನು ಹೊತ್ತುಕೊಂಡು ಕ್ಷೌರಿಕನ ಮನೆಗೆ ಹೋದರು.

ತನ್ನಲ್ಲಿರುವ ಚಿಮಟಿಗೆಯಿಂದ ಹಡಪಿಗನು, ಸಾಹುಕಾರನ ಮೂಗಿನೊಳಗಿನ ಆ ಕಾಳನ್ನು ತೆಗೆದು ಬೀಸಿ ಅ೦ಗಳಕ್ಕೆ ಒಗೆದನು. ಕೂಡಲೇ ಬದಿಯ ಗಿಡದಲ್ಲಿ