ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೯೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಪ್ರಾಣಿ ಕಥೆಗಳು
೧೬೭

"ಏನಂದೀ? ಅವ್ವನ ಮೊಲೆಯಲ್ಲಿ ಹಾಲಿರುತ್ತವೆಯೇ?” ಎಂದು ಉಪಾಧ್ಯರ ಕರು ಬೆಕ್ಕಸಬಟ್ಟು ಕೇಳಿತು.

ಅವೆರಡೂ ಕರುಗಳು ಮಾತಾಡುವುದನ್ನು ಕೇಳಿ ಇದಾವ ಹೊಸವಿಷಯ ಎಂದು ಕುತುಹಲದಿಂದ ಗೌಳಿಗರ ಕರು ಅವಸರದ ಹೆಜ್ಜೆ ಹಾಕಿ ಕೇಳಿತು "ಅವ್ವನಿಗೆ ಮೊಲೆ ಇರುವವೇ?"

ತಮ್ಮ ಎಳೆಕರು ಬೆಲೆಯುಳ್ಳ ಬದುಕಾಗಲೆಂದು ಆಕಳನ್ನು ಹಿಂಡಿಕೊಳ್ಳದೆ ಇದ್ದಷ್ಟು ಹಾಲನ್ನು ಒಕ್ಕಲಿಗರು ಹೋರಿಗರುವಿಗೆ ಬಿಟ್ಟುಕೊಡುತ್ತಾರೆ, ಉಪಾಧ್ಯರು ಹಾಲಿನ ಸಲುವಾಗಿ ಅವುಗಳನ್ನು ಕಟ್ಟಿರುವುದರಿಂದ ಅವರು, ಕೆಚ್ಚಲೊಳಗಿನ ಹಾಲನ್ನೆಲ್ಲ ಹಿಂಡಿಕೊಂಡು ಆಮೇಲೆ ಕರುವಿಗೆ ಬಿಡುವರು. ಅದು ಒಣ ಮೊಲೆಗಳನ್ನು ಚೀಪುವದು. ಅಂತೆಯೇ ಅದು ಕೇಳಿತು–"ಅವ್ವನ ಮೊಲೆಯಲ್ಲಿ ಹಾಲಿರುವವೇ" ಎಂದು.

ಇನ್ನು ಗೌಳಿಗರಂತೂ ಹಾಲು ಮಾರುವವರು. ಆಕಳ ಮೊಲೆಗಳನ್ನು ಜಗ್ಗಿ ಹಿಂಡಿಕೊಳ್ಳವರಲ್ಲದೆ, ಹಿಂದುಗಡೆ ಸಹ ಕರುವನ್ನು ಬಿಡುವದಿಲ್ಲ. ಅಂತೆಯೇ ಗೌಳಿಗರ ಕರು ಕೇಳುತ್ತದೆ — "ಅವ್ವನಿಗೆ ಮೊಲೆ ಇರುವವೇ" ಎಂದು.

 •