ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೯೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಪ್ರಾಣಿ ಕಥೆಗಳು
೧೭೧

ಮನೆಯ ಮುಂದೆ ಒಬ್ಬ ಸಾಧು ಹೊರಟಿದ್ದನು. ಅವನನ್ನು ಕೇಳಿದಳು ಅಕ್ಕ -

"ನನ್ನ ತಮ್ಮ ನನ್ನನ್ನು ಕರೆಯ ಬಂದಿದ್ದಾನೆ. ನಾನು ಹೇಗೆ ಹೋಗಲಿ? ತತ್ತಿ ನನ್ನ ಬೆನ್ನು ಹತ್ತುತ್ತದೆ."

ಸಾಧು ಏಳು ಹರಳುಗಳನ್ನು ಮಂತ್ರಿಸಿಕೊಟ್ಟನು. ಅವುಗಳನ್ನು ಉಪಯೋಗಿಸುವ ವಿಧಾನವನ್ನು ಹೇಳಿದನು -

"ಈ ಏಳು ಹರಳು ಒಗೆಯಿರಿ. ಏಳುಹರಿ ನೆಲ ದಾಟಿ ಹೋಗುವಿರಿ." ಅದೇ ರೀತಿಯಲ್ಲಿ ಅಕ್ಕ ತಮ್ಮ ನಿಶ್ಚಿಂತೆಯಿಂದ ತಮ್ಮೂರು ತಲುಪಿದರು.
 •