ವರ್ಣಿಕೆ ಇವು ಬೇಕೆಂಬುದು ನಿರ್ವಿವಾದ. ಆದರೆ ಭೀಮನ ಪಾತ್ರಕ್ಕೆ ಬಣ್ಣದ ವೇಷ
ಉಚಿತವೆ ಎಂಬುದು ಪರಿಶೀಲನಾರ್ಹ ಏಕೆಂದರೆ ರಾಕ್ಷಸ ಪಾತ್ರಗಳೇ ಆದ ಇಂದ್ರ
ಜಿತು, ಹಿರಣ್ಯಾಕ್ಷ ಮುಂತಾದ ಪಾತ್ರಗಳನ್ನು ಸಹ ರಾಜವೇಷದಲ್ಲಿ ಬದಲಾವಣೆ
ಮಾಡಿ ರೂಪಿಸಿದ ರೂಪದಿಂದಲೇ ಚಿತ್ರಿಸಿರುವಾಗ, ಉಗ್ರ ಸ್ವಭಾವದ್ದಾದರೂ
ನಾಯಕ' ಪಾತ್ರ (ಖಳನಾಯಕನಲ್ಲದ)ವಾದ ಭೀಮನಿಗೆ ಬಣ್ಣದ ವೇಷ ಉಚಿತ
ವಾದೀತೆ ಎಂಬುದನ್ನು ಯೋಚಿಸಬೇಕು.
ಭೀಮನ ಪಾತ್ರದ ಭವ್ಯತೆ, ಉಗ್ರತೆಗಳೂ ಕಾಣಬೇಕು, ಅವನು ಪಾಂಡವ
ರಲ್ಲೊಬ್ಬನಾಗಿ ಕಾಣಲೂ ಬೇಕು ಈ ಎರಡರ ಸಮನ್ವಯದಿಂದ ಭೀಮನ ಪಾತ್ರಕ್ಕೆ
ಸುಧಾರಿತ ಮುಖವರ್ಣಿಕೆ, ವೇಷ ಭೂಷಣಗಳನ್ನು ನಿರ್ಮಿಸಬೇಕು. ಈಗ ಇರುವ
ಭೀಮನ ಚಿತ್ರಣ ದುಶ್ಯಾಸನ ವಧೆಯ ರುದ್ರಭೀಮ'ನಿಗೆ ಸೂಕ್ತವಾದುದೇ ಆಗಿದೆ.
ರುದ್ರಭೀಮನ ವೇಷಕ್ಕಾಗಿ ಸೃಷ್ಟಿಗೊಂಡ ಪದ್ಧತಿಯೇ ಎಲ್ಲ ಸನ್ನಿವೇಶಗಳಲ್ಲೂ
ಬಳಕೆಯಾಗಿರಬಹುದೆ ಎಂದು ಅನುಮಾನಿಸುವುದಕ್ಕೆ ಎಡೆಯಿದೆ.
ಬಡಗುತಿಟ್ಟಿನಲ್ಲಿ ಭೀಮನ ಪಾತ್ರಕ್ಕೆ ದೊಡ್ಡ ಪಗಡಿ, ದಪ್ಪ ಮೀಸೆ
ಬಳಸುತ್ತಾರೆ. ಇದು ಔಚಿತ್ಯಪೂರ್ಣವಾಗಿದೆ. ತೆಂಕಿನಲ್ಲಿ ಕೃಷ್ಣಾರ್ಜುನ ಕಾಳಗದ
ಭೀಮನನ್ನು, ಪರಂಪರೆಯ ಮಾದರಿಯಲ್ಲಿ ಬದಲಾವಣೆಗೊಳಿಸಿ ತುಸು ಸೌಮ್ಯವಾಗಿ
ಸುವ ಕ್ರಮವಿದೆ. ಇದರಿಂದ ಭೀಮನ ವೇಷ ಮುಖವರ್ಣಿಕೆಗಳ ಸುಧಾರಣೆ ಬಗ್ಗೆ
ಚಿಂತನೆ ಹಿಂದೆಯೇ ನಡೆದಿದೆ ಅನ್ನುವುದೂ ಸ್ಪಷ್ಟವಾಗುತ್ತದೆ.
ಭೀಮನ ಮುಖವರ್ಣಿಕೆಯಲ್ಲಿ ಈಗ ಇರುವ ಬರವಣಿಗೆಗಳನ್ನು ಕಡಿಮೆ
ಮಾಡಿ, ಮೀಸೆಯ ಕೆಳಗಿನ ಭಾಗದ ಬರವಣಿಗೆಗಳನ್ನು ಲುಪ್ತಗೊಳಿಸಿ ಪ್ರಯೋಗಿಸ
ಬಹುದು. ಭೀಮನ ಕಿರೀಟದ ವಿನ್ಯಾಸದಲ್ಲಿ ಬದಲಾವಣೆಮಾಡಿ, ಅಥವಾ ಕೋಲು
ಕಿರೀಟದಲ್ಲೆ ದೊಡ್ಡ ಆಕಾರದ್ದನ್ನು ರಚಿಸಿ ಹೊಂದಿಸಬಹುದಾಗಿದೆ. ಭೀಮನ ವೇಷ
ಪರಂಪರೆಯ ಭೀಮನ ವೇಷ ಮತ್ತು ಅರ್ಜುನನ ಸಾಂಪ್ರದಾಯಿಕ ವೇಷ - ಇವುಗಳ
ಮಧ್ಯೆ ಇರುವ ಹಾಗೆ ಇದ್ದರೆ ಸೂಕ್ತವೆನಿಸಿತು, ಕೌಂಡ್ಲಿಕನಂತಹ ವೇಷಗಳ ಮುಖ
ವರ್ಣಿಕೆ ಇಂತಹ ಸುಧಾರಣೆಗೆ ಮಾರ್ಗದರ್ಶಿಯಾಗಬಲ್ಲುದು. (ಭೀಮನ ಪಾತ್ರದ
ಬರವಣಿಗೆಯನ್ನು ಸೌಮ್ಯ ಗೊಳಿಸಿ ಚಿತ್ರಿಸುವ ಒಂದು ಯತ್ನವನ್ನು ತರುಣ
ಕಲಾವಿದ ಶ್ರೀ ದಾಸಪ್ಪ ರೈ ಅವರು ಮಾಡಿದುದನ್ನು ಇತ್ತೀಚೆಗೆ ಕಂಡಿದ್ದೇನೆ.)
ರಾವಣ - ವೇಷ ವಿಧಾನ
ರಾವಣನ ವೇಷ, ಸಂಪ್ರದಾಯದಂತೆ ತೆಂಕು, ಬಡಗು, ಉತ್ತರ ಕನ್ನಡ