ಸಾಗರದ ಎಂ ಆರ್ ಲಕ್ಷ್ಮೀನಾರಾಯಣ ಇದೀಗ ಸಾಕಷ್ಟು ಪ್ರಸಿದ್ಧರಾದ
ಓರ್ವ ಪ್ರಮುಖ ತಾಳಮದ್ದಳೆ ಕಲಾವಿದ. ಸಾಹಿತ್ಯ ಸಂಸ್ಕಾರ, ಕಲ್ಪನೆಗಳುಳ್ಳ
ಮಾತುಗಾರಿಕೆ ಇವರದು.
ಇವರಿಷ್ಟೆ ಅಲ್ಲ, ತಾಳಮದ್ದಲೆಯಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡಿರುವ
ನೂರಾರು ಹಿರಿಯ ಅರ್ಥಧಾರಿಗಳಿದ್ದಾರೆ. ಕಳೆದ ಹತ್ತು ಹದಿನೈದು ವರ್ಷ
ಗಳಿಂದ ವಿವಿಧ ಕಾರಣಗಳಿಂದಾಗಿ ತಾಳಮದ್ದಲೆಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಈ ಬೆಳೆಯುತ್ತಿರುವ ಆಸಕ್ತಿ, ಅದಕ್ಕೆ ತಕ್ಕಹಾಗೆ ಬೆಳೆದಿರುವ ಸಂಪರ್ಕ, ಸಾರಿಗೆ
ಸೌಲಭ್ಯ, ಆರ್ಥಿಕವಾದ ಅನುಕೂಲ ಈ ಕಲೆಯ ಬಗೆಗೆ ಇನ್ನಷ್ಟು ಆಸಕ್ತಿ ಬೆಳೆಸಲು
ಸಾಧ್ಯವಿದೆ.
೧೩
ತಾಳಮದ್ದಳೆಯ ಯಶಸ್ಸಿಗೆ ಹಿಮ್ಮೇಳದ ಪಾತ್ರ ಬಹುಮುಖ್ಯ. ಆಟ
ತಾಳಮದ್ದಳೆ ಎರಡಕ್ಕೂ ಭಾಗವತಿಕೆ, ಚೆಂಡೆ ಮದ್ದಳೆಗಳು ಸಮಾನವಾಗಿರುವುದ
ರಿಂದ, ಹಿಮ್ಮೇಳದ ಕಲಾವಿದರ ಬಗೆಗೆ ನಾನು ಇಲ್ಲಿ ಉಲ್ಲೇಖಿಸಿಲ್ಲ.
ತಾಳಮದ್ದಳೆಯಲ್ಲಿ ಭಾಗವತನಿಗೂ, ಹಿಮ್ಮೇಳಕ್ಕೂ ಬಯಲಾಟದಷ್ಟು
ಹೊಣೆ ಇಲ್ಲವಾದರೂ, ಒಳ್ಳೆಯ ಹಿಮ್ಮೇಳ ಇದ್ದರೆ ಮಾತ್ರ ತಾಳಮದ್ದಳೆ ಯಶಸ್ವಿ
ಆಗುತ್ತದೆ. ಅರ್ಥಧಾರಿಗೆ ಬೇಕಾದ ಭಾವಪ್ರಚೋದನೆ, ಪೋಷಣೆಗಳನ್ನು ಭಾಗ
ವತನ, ಹಿಮ್ಮೇಳವೂ ಒದಗಿಸಬೇಕು. ಕಾರ್ಯಕ್ರಮದ ನಿರ್ದೇಶನ ಭಾಗವತನದೆ.
ಒಬ್ಬ ಸಮರ್ಥ ಭಾಗವತ ಒಂದು ಹಾಡಿನ ಎತ್ತುಗಡೆಯಿಂದ ಅರ್ಥಧಾರಿಗೆ ಹೊಸ
ಕಲ್ಪನೆಯನ್ನು ನೀಡಬಲ್ಲ. ನಾದ, ಲಯದ ಪ್ರಬುದ್ಧ ವಾತಾವರಣ ಸುವ್ಯವಸ್ಥಿತ
ವಾಗಿದ್ದಾಗ, ಸಾಹಿತ್ಯಪ್ರಜ್ಞೆಯುಳ್ಳ ಭಾಗವತಿಕೆ ಇದ್ದಾಗ ಅರ್ಥಧಾರಿಗೆ ಆಗುವ
ಆನಂದವೇ ಬೇರೆ. ಆಟದಲ್ಲಿ ಸಮರ್ಥನೆನಿಸಿದ ಭಾಗವತನೇ ತಾಳಮದ್ದಳೆಯಲ್ಲೂ
ಸಮರ್ಥವಾಗಿ ಹಾಡಬಲ್ಲ. ಅರ್ಥಧಾರಿಯು ಮಾತುಗಾರಿಕೆಯ ದಾರಿಯನ್ನು ಲಕ್ಷ್ಯ
ವಿಷ್ಟು ಗಮನಿಸಿ, ಪದ್ಯಗಳನ್ನು ಎತ್ತುವಲ್ಲಿ ಇನ್ನಷ್ಟು ಹೆಚ್ಚಿನ ಹೊಣೆ ಇದೆ
ಎನ್ನಬಹುದು.
ಸಾಹಿತ್ಯ ಗಮಕದಲ್ಲೂ, ಹಿಮ್ಮೇಳದಲ್ಲೂ- ಕೆಲವೊಂದು ಸ್ವತಂತ್ರ
ಪ್ರಯೋಗಗಳನ್ನೂ,ಜನರಂಜನೆಯ ಅಂಶಗಳನ್ನು ಭಾಗವತನಿಗೂ.ವಾದ್ಯವಾದಕರಿಗೂ ಮುಕ್ತ ಅವಕಾಶ ಇಲ್ಲಿದೆ.
ರಂಗಸ್ಥಳದ, ಅಭಿನಯ,