ಅಜ್ಞಾನ ಸುಜ್ಞಾನಗಳೆರಡೂ ಶಿವನೆಂದಡೆ ಶಿವಜ್ಞಾನಿಗಳು ಮೆಚ್ಚುವರೆ ? ಶಿವ ಶಕ್ತಿಗಳೆರಡೂ ನೀನೇ ಎಂದಡೆ ಮಹಾನುಭಾವಿಗಳು ಪರಿಣಾಮಿಸುವರೆ ? ತನ್ನ ತಾನಾರೆಂಬುದನರಿಯದೆ ಅನ್ಯವೆಲ್ಲವೂ ಬೊಮ್ಮವೆಂಬ ಈ ಕರ್ಮದ ನುಡಿಯ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು ?