ಮನದ ಕೊನೆಯ ಮೊನೆಯ ಮೇಲೆ ನೆನೆದ ನೆನಹು ಜನನ ಮರಣವ ನಿಲಿಸಿತ್ತು. ಜ್ಞಾನಜ್ಯೋತಿಯ ಉದಯ ಭಾನುಕೋಟಿಯ ಮೀರಿ ಸ್ವಾನುಭಾವದ ಉದಯ ಜ್ಞಾನಶೂನ್ಯದಲಡಗಿದ ಘನವನೇನೆಂಬೆ ಗುಹೇಶ್ವರಾ !