ವಿಷಯಕ್ಕೆ ಹೋಗು

ಶಿವಭಕ್ತಿಯುಳ್ಳವಂಗೆ; ಕಾಮ ಬೇಡ,

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಶಿವಭಕ್ತಿಯುಳ್ಳವಂಗೆ; ಕಾಮ ಬೇಡ
ಕ್ರೋಧ ಬೇಡ
ಲೋಭ ಬೇಡ; ಮೋಹ ಬೇಡ
ಮದ ಬೇಡ
ಮತ್ಸರ ಬೇಡ. ಶಿವಭಕ್ತಿಯುಳ್ಳವಂಗೆ; ಕಾಮ ಬೇಕು
ಕ್ರೋಧ ಬೇಕು
ಲೋಭ ಬೇಕು
ಮೋಹ ಬೇಕು
ಮದ ಬೇಕು
ಮತ್ಸರ ಬೇಕು. ಬೇಕೆಂಬುದಕ್ಕಾವ ಗುಣ ? ಕಾಮ ಬೇಕು ಲಿಂಗದಲ್ಲಿ
ಕ್ರೋಧ ಬೇಕು ಕರಣಂಗಳಲ್ಲಿ
ಲೋಭ ಬೇಕು ಪಾದೋದಕ ಪ್ರಸಾದದಲ್ಲಿ
ಮೋಹ ಬೇಕು ಗುರುಲಿಂಗ ಜಂಗಮದಲ್ಲಿ
ಮದ ಬೇಕು ಶಿವಚಾರದಿಂದ ಘನವಿಲ್ಲವೆಂದು
ಮತ್ಸರ ಬೇಕು ಹೊನ್ನು ಹೆಣ್ಣು ಮಣ್ಣಿನಲ್ಲಿ_ಇಂತೀ ಷಡ್ಗುಣವಿರಬೇಕು. ಬೇಡವೆಂಬುದಕ್ಕಾವುದು ಗುಣ ? ಕಾಮ ಬೇಡ ಪರಸ್ತ್ರೀಯರಲ್ಲಿ
ಕ್ರೋಧ ಬೇಡ ಗುರುವಿನಲ್ಲಿ
ಲೋಭ ಬೇಡ ತನು ಮನ ಧನದಲ್ಲಿ
ಮೋಹ ಬೇಡ ಸಂಸಾರದಲ್ಲಿ
ಮದ ಬೇಡ ಶಿವಭಕ್ತರಲ್ಲಿ
ಮತ್ಸರ ಬೇಡ ಸಕಲಪ್ರಾಣಿಗಳಲ್ಲಿ._ ಇಂತೀ ಷಡ್ಗುಣವನರಿದು ಮೆರೆಯಬಲ್ಲಡೆ ಆತನೇ ಸಹಜ ಸದ್ಭಕ್ತ ಕಾಣಾ ಕೂಡಲಚೆನ್ನಸಂಗಮದೇವಾ