ಲಿಂಗವ ನಚ್ಚದೀ ಮನವು ಜಂಗಮವ ನಂಬದೀ ಮನವು ಕೂಪರ ಕಂಡಡೆ ಒಲ್ಲದೀ ಮನವು. ಈ ಮನದ ಭ್ರಮೆಯನೆಲ್ಲವ ಮರೆಸಿ ನಿಮ್ಮ ಶರಣರಿಗೆ ಶರಣೆಂಬುದ ಕರುಣಿಸು ಕೂಡಲಸಂಗಮದೇವಾ. 258