ಸೂಳೆಗೆ ಹುಟ್ಟಿದ ಕೂಸಿನಂತೆ ಆರನಾದಡೆಯೂ `ಅಯ್ಯಾ ಅಯ್ಯಾ ಎನಲಾರೆ. ಚೆನ್ನಯ್ಯನೆಮ್ಮಯ್ಯನು ಚೆನ್ನಯ್ಯನ ಮಗ ನಾನು. ಕೂಡಲಸಂಗನ ಮಹಾಮನೆಯಲಿ ಧರ್ಮಸಂತಾನಿ ಭಂಡಾರಿ ಬಸವಣ್ಣನು. 347