ನಾದಪ್ರಿಯ ಶಿವನೆಂಬರು, ನಾದಪ್ರಿಯ

ವಿಕಿಸೋರ್ಸ್ದಿಂದ


Pages   (key to Page Status)   

ನಾದಪ್ರಿಯ ಶಿವನೆಂಬರು
ನಾದಪ್ರಿಯ ಶಿವನಲ್ಲಯ್ಯಾ. ವೇದಪ್ರಿಯ ಶಿವನೆಂಬರು
ವೇದಪ್ರಿಯ ಶಿವನಲ್ಲಯ್ಯಾ. ನಾದವ ನುಡಿಸಿದ ರಾವಳಂಗೆ ಅರೆ ಆಯುಷ್ಯವಾುತ್ತು. ವೇದವನೋದಿದ ಬ್ರಹ್ಮನ ಶಿರ ಹೋಯಿತ್ತು. ನಾದಪ್ರಿಯನೂ ಅಲ್ಲ
ವೇದಪ್ರಿಯನೂ ಅಲ್ಲ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ. 181