ಕಾಲುಗಳೆಂಬುವು ಗಾಲಿ ಕಂಡಯ್ಯಾ ದೇಹವೆಂಬುದು ತುಂಬಿದ ಬಂಡಿ ಕಂಡಯ್ಯಾ. ಬಂಡಿಯ ಹೊಡೆವರೈವರು ಮಾನಿಸರು ಒಬ್ಬರಿಗೊಬ್ಬರು ಸಮವಿಲ್ಲಯ್ಯ. ಆದರಿಚ್ಛೆಯನರಿದು ಹೊಡೆಯದಿರ್ದಡೆ ಅದರಚ್ಚು ಮುರಿಯಿತ್ತು ಗುಹೇಶ್ವರಾ.