ಎಲವೋ ಎಲವೋ ಪಾಪಕರ್ಮವ ಮಾಡಿದವನೇ ಎಲವೋ ಎಲವೋ ಬ್ರಹ್ಮೇತಿಯ ಮಾಡಿದವನೇ ಒಮ್ಮೆ ಶರಣೆನ್ನೆಲವೋ. ಒಮ್ಮೆ ಶರಣೆಂದಡೆ ಪಾಪಕರ್ಮ ಓಡುವವು. ಸರ್ವಪ್ರಾಯಶ್ಚಿತ್ತಕ್ಕೆ ಹೊನ್ನ ಪರ್ವತಂಗಳೈದವು. ಒಬ್ಬಗೆ ಶರಣೆನ್ನು ನಮ್ಮ ಕೂಡಲಸಂಗಮದೇವಂಗೆ.