ಲಿಂಗಾಂಗಿಗಳಲ್ಲಿ ಹೊಲೆಸೂತಕವ ಕಲ್ಪಿಸುವನ್ನಕ್ಕ ಪ್ರಾಣಲಿಂಗಸಂಬಂಧಿಯಲ್ಲ. ಜಂಗಮದಲ್ಲಿ ಕುಲಸೂತಕವ ಹಿಡಿವನ್ನಕ್ಕ ಶಿವಚಾರಯುಕ್ತನಾದ ಭಕ್ತಾನುಭಾವಿಯಲ್ಲ. ಪ್ರಸಾದದಲ್ಲಿ ಎಂಜಲಸೂತಕವ ಭಾವಿಸುವನ್ನಕ್ಕ ಪ್ರಸಾದಿಯಲ್ಲ ಭಕ್ತನಲ್ಲ ಶರಣನಲ್ಲ ಲಿಂಗೈಕ್ಯನಲ್ಲ ಅವಂಗೆ ಲಿಂಗವಿಲ್ಲ ಕಾಣಾ ಕೂಡಲಚೆನ್ನಸಂಗಯ್ಯಾ.