ಮಡಕೆಯ ಮಾಡುವಡೆ ಮಣ್ಣೆ

ವಿಕಿಸೋರ್ಸ್ದಿಂದ



Pages   (key to Page Status)   

ಮಡಕೆಯ ಮಾಡುವಡೆ ಮಣ್ಣೆ ಮೊದಲು
ತೊಡಿಗೆಯ ಮಾಡುವಡೆ ಹೊನ್ನೆ ಮೊದಲು
ಶಿವಪಥವನರಿವಡೆ ಗುರುಪಥವೆ ಮೊದಲು
ಕೂಡಲಸಂಗಮದೇವರನರಿವಡೆ ಶರಣರ ಸಂಗವೆ ಮೊದಲು. 70