ಉಲುಹಿನ ವೃಕ್ಷದ ನೆಳಲಡಿಯಲಿರ್ದು,

ವಿಕಿಸೋರ್ಸ್ದಿಂದ



Pages   (key to Page Status)   


ಉಲುಹಿನ ವೃಕ್ಷದ ನೆಳಲಡಿಯಲಿರ್ದು
ಗಲಭೆಯನೊಲ್ಲೆನೆಂಬುದೆಂತಯ್ಯಾ? ಪಟ್ಟದರಾಣಿಯ ಮುಖವ ಮುದ್ರಿಸಿ
ಮೆಟ್ಟಿ ನಡೆವ ಸತಿಯ ಶಿರವ
ಮೆಟ್ಟಿ ನಿಲುವ ಪರಿಯೆಂತಯ್ಯಾ? ಆದಿಯ ಹೆಂಡತಿಯನುಲ್ಲಂಘಿಸಿದ ಕಾರಣ
ಮೇದಿನಿಯ ಮೇಲೆ ನಿಲಬಾರದು. ಸಾಧಕರೆಲ್ಲರು ಮರುಳಾದುದ ಕಂಡು ನಾಚಿ ನಗುತ್ತಿರ್ದೆನು ಗುಹೇಶ್ವರಾ.