ಶಿವನೆ ಜಗತ್ರಯಕ್ಕೊಡೆಯನೆಂದುದು ವೇದ ಉತ್ಪತ್ತಿ ಸ್ಥಿತಿ ಲಯಕಾರಣನೆಂದುದು ವೇದ `ಈಶಃ ಸರ್ವಸ್ಯ ಜಗತಃ ಪ್ರಭುಃ ಪ್ರೀಣಾತಿ ವಿಶ್ವಭುಕ್' ಎಂದುದು ಶ್ರುತಿ ಇದು ಕಾರಣ ಕೂಡಲಸಂಗಮದೇವನೊಬ್ಬನೆ ದೇವನು.