ಮನಕ್ಕೆ ಮನೋಹರವಲ್ಲದ ಗಂಡರು ಮನಕೆ ಬಾರರು ಕೇಳವ್ವಾ ಕೆಳದೀ ಪನ್ನಗಭೂಷಣರಲ್ಲದ ಗಂಡರು ಇನ್ನೆನಗಾಗದ ಮೊರೆ ನೋಡವ್ವಾ. ಕನ್ನೆಯಂದಿನ ಕೂಟ ಚಿಕ್ಕಂದಿನ ಬಾಳುವೆ ನಿಮ್ಮಾಣೆಯಯ್ಯಾ ಕೂಡಲಸಂಗಮದೇವಾ. 503