ಎನ್ನ ಜನ್ಮವ ತೊಡೆದನೀ ಧರ್ಮಿ ಎನ್ನ ಜನ್ಮವನತಿಗಳೆದಾ ಸಧರ್ಮಿ. ಎನ್ನ ಭವಬಂಧನವ ನಿಃಕರಿಸಿದೆಯಾಗಿ ಶಿವನೆ ಗತಿಯೆಂದು ನಂಬಿದೆನಯ್ಯಾ. ಎನ್ನ ಅಷ್ಟಮದಂಗಳ ಸುಟ್ಟುರುಹಿದೆಯಾಗಿ ಕಟ್ಟುಗ್ರದಿಂದ ನಿಮ್ಮ ಶ್ರೀಚರಣವ ಕಂಡೆ. ಸ್ಟೃಪ್ರತಿಪಾಲಕಾ ನಿಮ್ಮ ನಂಬಿದೆ ಕರುಣಿಸು ಕೂಡಲಸಂಗಮದೇವಾ.