ಒಲ್ಲೆನೆಂಬುದು ವೈರಾಗ್ಯ ಒಲಿವೆನೆಂಬುದು ಕಾಯಗುಣ. ಆವ ಪದಾರ್ಥವಾದಡೇನು ತನ್ನಿದ್ದೆಡೆಗೆ ಬಂದುದ ಲಿಂಗಾರ್ಪಿತವ ಮಾಡಿ ಭೋಗಿಸುವುದೆ ಆಚಾರ. ಕೂಡಲಸಂಗಮದೇವರನೊಲಿಸ ಬಂದ ಪ್ರಸಾದಕಾಯವ ಕೆಡಿಸಲಾಗದು.