ಕಂಗಳು ತುಂಬಿದ ಬಳಿಕ ನೋಡಲಿಲ್ಲ ಕಿವಿಗಳು ತುಂಬಿದ ಬಳಿಕ ಕೇಳಲಿಲ್ಲ ಕೈಗಳು ತುಂಬಿದ ಬಳಿಕ ಪೂಜಿಸಲಿಲ್ಲ ಮನ ತುಂಬಿದ ಬಳಿಕ ನೆನೆಯಲಿಲ್ಲ ಮಹಂತ ಕೂಡಲಸಂಗಮದೇವನ.