ಸ್ವಾಮಿಭೃತ್ಯಸಂಬಂಧಕ್ಕೆ ಆವುದು ಪಥವೆಂದಡೆ: ದಿಟವ ನುಡಿವುದು ನುಡಿದಂತೆ ನಡೆವುದು. ನುಡಿದು ಹುಸಿವ ನಡೆದು ತಪ್ಪುವ ಪ್ರಪಂಚಿಯನೊಲ್ಲ ಕೂಡಲಸಂಗಮದೇವ. 237