ಎನ್ನ ಕರಕಮಲಮಧ್ಯದಲ್ಲಿ ಪರಮ ಶಿವಲಿಂಗವ ತುಂಬಿ ಆ ಲಿಂಗದ ಮಧ್ಯದಲ್ಲಿ ಕಂಗಳ ತುಂಬಿ ಆ ಕಂಗಳ ಮಧ್ಯದಲ್ಲಿ ಮನವ ತುಂಬಿ ಆ ಮನದ ಮಧ್ಯದಲ್ಲಿ ಭಾವವ ತುಂಬಿ ಪರವಶನಾಗಿರ್ದೆನಯ್ಯ ನಿಮ್ಮೊಳಗೆ ಅಖಂಡೇಶ್ವರಾ.