ನೀನಲ್ಲದನ್ಯದೈವವುಂಟೆಂಬವನ ಬಾಯ ಕೆನ್ನೆವಾರೆ ಸೀಳಿದಲ್ಲದೆ ಎನ್ನ ಮುನಿಸು ಹೋಗದಯ್ಯಾ. ಎನ್ನ ಕೋಪವಡಗದಯ್ಯಾ. ಎನ್ನ ಬಿನ್ನಪವನವಧರಿಸು ಕೂಡಲಸಂಗಮದೇವಾ.