ಚಿನ್ಮಯ ಚಿತ್ಪ್ರಕಾಶ ಚಿದಾನಂದ ಲಿಂಗವೆ ಎನ್ನ ಹೃದಯಕಮಲದಲ್ಲಿ ಬೆಳಗಿ ತೋರುವ ಪರಂಜ್ಯೋತಿ ಎನ್ನ ಕರಸ್ಥಲಕ್ಕನುವಾದ ಧರ್ಮಿ ಎನ್ನ ಕಂಗಳ ಕೊನೆಯಲ್ಲಿ ಮೂರ್ತಿಗೊಂಡಿಪ್ಪೆಯಯ್ಯಾ ಕೂಡಲಸಂಗಮದೇವಯ್ಯಾ.