ಮಣ್ಣ ಮಡಕೆ ಮಣ್ಣಾಗದು ಕ್ರೀಯಳಿದು ಬೆಣ್ಣೆ ಕರಗಿ ತುಪ್ಪವಾಗಿ ಮರಳಿ ಬೆಣ್ಣೆಯಾಗದು ಕ್ರೀಯಳಿದು ಹೊನ್ನ ಕಬ್ಬುನವಾಗದು ಕ್ರೀಯಳಿದು ಮುತ್ತು ನೀರಲ್ಲಿ ಹುಟ್ಟಿ ಮತ್ತೆ ನೀರಾಗದು ಕ್ರೀಯಳಿದು ಕೂಡಲಸಂಗನ ಶರಣನಾಗಿ ಮರಳಿ ಮಾನವನಾಗ ಕ್ರೀಯಳಿದು.