ಪುಣ್ಯಗಳಹ ಕಾಲಕ್ಕೆ ಹಗೆಗಳು ತನ್ನವರಹರು
ಪುಣ್ಯಗಳಹ ಕಾಲಕ್ಕೆ ಮಣ್ಣು ಹೊನ್ನಹುದು
ಪುಣ್ಯಗಳಹ ಕಾಲಕ್ಕೆ ಹಾವು ಲೇವಳವಹುದು
ಪುಣ್ಯಗಳಹ ಕಾಲಕ್ಕೆ ಅನ್ಯರು ತನ್ನವರಹರು. ಇಂತಪ್ಪ ಪುಣ್ಯಂಗಳೆಲ್ಲವೂ ಭಕ್ತಿಯಿಂದಹುದು
ಭಕ್ತಿ ಕೆಟ್ಟಡೆ ಪುಣ್ಯವು ಕೆಡುವುದು. ಇಂತಪ್ಪ ಭಕ್ತಿಯೂ ಪುಣ್ಯವೂ ಚೆನ್ನಬಸವಣ್ಣನಿಗುಂಟಾಗಿ
ನಾನು ಬದುಕಿದೆನಯ್ಯಾ
ಕೂಡಲಸಂಗಮದೇವಾ.