ಅಂಗವ ಬಿಟ್ಟು ಹೋಹ ಪ್ರಾಣಕ್ಕೆ ಲಿಂಗವಿಲ್ಲ ಎಂದೆಂಬರು ಒಡಂಬಡಿಸಿಹೆನು ಕೇಳಿರಣ್ಣಾ. ಹಿಂಗಿದ ಪುಷ್ಪದ ಪರಿಮಳವನುಂಡೆಳ್ಳು ಅವು ತಮ್ಮಂಗವ ಬಿಟ್ಟು ಹೋಹಾಗ ಕಮ್ಮೆಣ್ಣೆಯಾಗದಿಪ್ಪುವೆ ? ಲಿಂಗೈಕ್ಯರು ಅಳಿದಡೆ ಕೈಲಾಸದಲ್ಲಿ ತಮ್ಮ ಇಷ್ಟಲಿಂಗಸಹವಾಗಿಪ್ಪರು ನೋಡಾ ಕೂಡಲಚೆನ್ನಸಂಗಮದೇವಾ.